×
Ad

ಹಾಸನ: ಬೀದಿನಾಯಿ ದಾಳಿ; ಇಬ್ಬರು ಮಕ್ಕಳಿಗೆ ಗಂಭೀರ ಗಾಯ

Update: 2023-07-28 23:12 IST

ಹಾಸನ: ಬೀದಿನಾಯಿ ದಾಳಿಯಿಂದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಆಜಾದ್ ಮೊಹಲ್ಲಾದ ನಿವಾಸಿ ಮುಹಮ್ಮದ್ ಯಾಸಿನ್ ಎಂಬವರ ಮಕ್ಕಳಾದ ಉಸ್ಮಾನ್ ಅಲಿ ಹಾಗೂ ಶೌಕತ್ ಅಲಿ ಎಂಬವರು ಬೀದಿನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದಲ್ಲಿ ಬೀದಿನಾಯಿಗಳ ಹಾವಳಿ ತೀವ್ರಗೊಂಡಿದೆ ಎಂದು ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದಾರೆ.

ಎರಡು ದಿನಗಳ ಹಿಂದೆ ಮಕ್ಕಳು ಮನೆ ಸಮೀಪ ಆಟವಾಡುತ್ತಿದ್ದಾಗ ಬೀದಿನಾಯಿ ದಾಳಿ ದಾಳಿ ಮಾಡಿವೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿ ತಡೆಗೆ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News