×
Ad

ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ಎಳೆದು ತರಬೇಡಿ. ನಾನು ರಾಜಕೀಯದಲ್ಲಿ ಇಲ್ಲ: ಟಬು ರಾವ್

Update: 2024-10-04 20:51 IST

ಬೆಂಗಳೂರು: ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನು ಎಳೆದು ತರುತ್ತಿದೆ ಎಂದು ಆರೋಪಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ನಾನು ರಾಜಕೀಯದಲ್ಲಿಲ್ಲ. ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗೂ ಸಂಬಂಧವಿಲ್ಲ. ನಾನು ಮುಸ್ಲಿಮ್ ಕುಟುಂಬದಿಂದ ಬಂದು ಹಿಂದೂ ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನು ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಸಾವರ್ಕರ್ ಕುರಿತ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಬಿಜೆಪಿ, ಸಚಿವರ ಪತ್ನಿ ಟಬು ರಾವ್ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಬಿಜೆಪಿ ಟ್ವೀಟ್‍ನಲ್ಲಿ ತಮ್ಮ ಹೆಸರನ್ನು ಎಳೆದು ತಂದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಅವರು ಈ ಬಗ್ಗೆ ಸಂಬಂಧಪಟ್ಟವರನ್ನು ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News