×
Ad

ಮೈತ್ರಿ ಬಗ್ಗೆ ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ: ಬಿ.ಎಸ್‌.ಯಡಿಯೂರಪ್ಪ ಯೂಟರ್ನ್‌

Update: 2023-09-14 00:39 IST

ಫೈಲ್‌ ಚಿತ್ರ

ಬೆಂಗಳೂರು: ʼಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆʼ ಎಂದು ಹೇಳಿಕೆ ನೀಡಿದ್ದ ‌ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಬುಧವಾರ ಯೂಟರ್ನ್‌ ಹೊಡೆದಿದ್ದಾರೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತರೆಳಿರುವ  ಅವರು ಸುದ್ದಿಗಾರರ ಜತೆಗೆ ಮಾತನಾಡಿ ʼಮೈತ್ರಿ ಬಗ್ಗೆ ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ. ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಚರ್ಚೆ ಬಳಿಕ ವಾಸ್ತವಿಕ ಸಂಗತಿ ಗೊತ್ತಾಗಲಿದೆʼ ಎಂದು ಹೇಳಿದರು.

ʼʼ ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ಅನುಕೂಲವಾಗಲಿದೆ. ಮೈತ್ರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ ಅಂತಿಮ ತೀರ್ಮಾನ ಆಗಿಲ್ಲʼʼ ಎಂದು ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News