×
Ad

ಸಂಪುಟ ಪುನಾರಚನೆ ವಿಚಾರ | ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದೇನು?

Update: 2024-11-28 13:13 IST

ಬೆಂಗಳೂರು : "ಸಂಪುಟ ಪುನಾರಚನೆ ಬಗ್ಗೆ ನನಗೆ ಗೊತ್ತಿಲ್ಲ. ದಿಲ್ಲಿಯಲ್ಲಿ ಸಿಎಂ, ಡಿಸಿಎಂ ಚರ್ಚೆ ಮಾಡಿ ಏನು ತೀರ್ಮಾನ ಮಾಡಿಕೊಂಡು ಬರುತ್ತಾರೆ ಎಂದು ಗೊತ್ತಿಲ್ಲ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಗುರುವಾರ ಸದಾಶಿವನಗರದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ದಿಲ್ಲಿಗೆ ಹೋಗಿದ್ದಾರೆ. ಯಾಕೆ ಅಂತ ಗೊತ್ತಿಲ್ಲ. ಇಲಾಖೆಯ ಕೆಲಸಕ್ಕೆ ಹೋಗಿದ್ದಾರೆಯೇ, ಅಥವಾ ಪಕ್ಷದ ವಿಚಾರವಾಗಿ ಹೋಗಿದ್ದಾರೆಯೇ ಗೊತ್ತಿಲ್ಲ. ಇವತ್ತು ಸಿಎಂ ಸಿದ್ದರಾಮಯ್ಯ ಕೂಡ ದಿಲ್ಲಿಗೆ ಹೋಗುತ್ತಿದ್ದಾರೆ. ನಾಳೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಇದೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್‌ ಬಳಿ ಚರ್ಚೆ ಮಾಡುತ್ತಾರೆಯೇ ಅನ್ನೋದು ಗೊತ್ತಿಲ್ಲʼ ಎಂದು ಹೇಳಿದರು.

ʼಖಾತೆ ಬದಲಾವಣೆ ಬಗ್ಗೆಯೂ ಏನು ತೀರ್ಮಾನ ಮಾಡುತ್ತಾರೆ ಎಂದು ತಿಳಿದಿಲ್ಲ. ಇಷ್ಟು ಸಮಯ ವರಿಷ್ಠರು ಏನೆಲ್ಲ ಜವಾಬ್ದಾರಿ ಕೊಟ್ಟಿದ್ದಾರೆ, ಅವುಗಳನ್ನು ನಿಭಾಯಿಸಿಕೊಂಡು ಬಂದಿದ್ದೇನೆ. ಈಗಲೂ ಅವರು ಏನೇ ಜವಾಬ್ದಾರಿ ಕೊಟ್ಟರೂ ಮಾಡುವುದಕ್ಕೆ ತಯಾರಿದ್ದೇನೆ.  ಸರಕಾರ, ಪಕ್ಷದಲ್ಲಿ ಕೊಟ್ಟ ಜವಾಬ್ದಾರಿ ಮಾಡುತ್ತಾ ಬಂದಿದ್ದೇನೆʼ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News