×
Ad

ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Update: 2025-06-27 18:12 IST

ಬೆಂಗಳೂರು : ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ. ಆಡಳಿತದ ದೃಷ್ಟಿಯಿಂದ ಮುಖ್ಯಮಂತ್ರಿ ಒಬ್ಬರೇ ಪವರ್ ಸೆಂಟರ್ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ. ಆಡಳಿತದ ದೃಷ್ಟಿಯಿಂದ ಮುಖ್ಯಮಂತ್ರಿ ಒಬ್ಬರೇ ಪವರ್ ಸೆಂಟರ್.ಜತೆಗೆ ಪಕ್ಷದ ಅಧ್ಯಕ್ಷರು, ಉಸ್ತುವಾರಿಗಳೂ ಪವರ್ ಸೆಂಟರ್‍ಗಳೇ. ಎಲ್ಲಕ್ಕಿಂತ ಮಿಗಿಲಾಗಿ ಹೈಕಮಾಂಡ್ ಇದೆ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.

ಸೆಪ್ಟಂಬರ್ ನಂತರ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆ ಗೊತ್ತಿಲ್ಲ. ಸೆಪ್ಟೆಂಬರ್‍ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ ಎಂದು ನುಡಿದರು.

ಮಂತ್ರಿಗಳ ಬದಲಾವಣೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗಿರುವ ಮಾಹಿತಿ ಪ್ರಕಾರ ಹೇಳಿರಬಹುದು. ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ತಿಳಿದಂತೆ ಯಾವುದೇ ಬದಲಾವಣೆ ಆಗಲ್ಲ. ಮುಂದೇನಾಗುತ್ತೆ ಹೇಗೆ ಹೇಳಲು ಸಾಧ್ಯ? ಎಂದು ಅವರು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News