×
Ad

ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ರೂಪಾ ವರ್ಗಾವಣೆ

Update: 2025-03-05 18:07 IST

ಬೆಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ)ದ ಐಜಿಪಿಯಾಗಿದ್ದ ಡಿ.ರೂಪಾ ಅವರನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಐಎಸ್‍ಡಿ (ರಾಜ್ಯ ಆಂತರಿಕ ಭದ್ರತಾ ವಿಭಾಗ) ಐಜಿಪಿಯಾಗಿದ್ದ ಡಿ.ರೂಪಾ ಅವರು ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ತಮ್ಮ ಕೊಠಡಿಯನ್ನು ಅನಧಿಕೃತವಾಗಿ ಪ್ರವೇಶಿಸಿ, ಕೆಲ ದಾಖಲೆಗಳನ್ನು ಇರಿಸಿದ್ದಾರೆ ಎಂದು ಆರೋಪಿಸಿ ಐಎಸ್‍ಡಿಯ ನಿರ್ಗಮಿತ ಡಿಐಜಿ ವರ್ತಿಕಾ ಕಟಿಯಾರ್ ಇತ್ತೀಚಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ದೂರು ಸಲ್ಲಿಸಿದ್ದರು.

ಇದೀಗ ರಾಜ್ಯ ಸರಕಾರ ಏಕಾಏಕಿ ಡಿ.ರೂಪಾ ಅವರನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆಗೊಳಿಸಿದೆ. ಇನ್ನೂ, ಎರಡು ದಿನಗಳ ಹಿಂದಷ್ಟೆ ವರ್ತಿಕಾ ಕಟಿಯಾರ್ ಅವರನ್ನು ಐಎಸ್‍ಡಿಯಿಂದ ಗೃಹರಕ್ಷಕ ದಳ ಹಾಗೂ ಸಿವಿಲ್ ಡಿಫೆನ್ಸ್ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News