ಕೇಂದ್ರದಿಂದ ಬರ ಪರಿಹಾರ ಬಿಡುಗಡೆ | ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ : ಡಿಕೆಶಿ ವ್ಯಂಗ್ಯ

Update: 2024-04-27 10:38 GMT

‌ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರವನ್ನು ಇಂದು(ಎ.27) ಘೋಷಣೆ ಮಾಡಿದೆ.

ಈ ಕುರಿತು ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, "ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ 18,172 ಕೋಟಿ ರೂ. ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ರೂ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್‌ ಸರ್ಕಾರ ಎಷ್ಟೇ ದೊಡ್ಡ ಸವಾಲುಗಳನ್ನಾದರೂ ಸ್ವೀಕರಿಸಲು ಸಿದ್ಧವಿದೆ. ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ" ಎಂದು ಕೇಂದ್ರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಬಿಡುಗಡೆ ಮಾಡುವಂತೆ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು  ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಮೆಟ್ಟಿಲೇರಿತ್ತು. ಬಳಿಕ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ ನಲ್ಲಿ ಭರವಸೆ ನೀಡಿತ್ತು . ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News