ದಸರಾ ಕ್ರೀಡಾಕೂಟ | ವಿನೇಶ್ ಫೋಗಟ್ ವಿಶೇಷ ಅತಿಥಿ
Update: 2025-09-20 23:27 IST
ವಿನೇಶ್ ಫೋಗಟ್ | PC : PTI
ಮೈಸೂರು, ಸೆ.20 : ದಸರಾ ಕ್ರೀಡಾಕೂಟ 2025ರ ಉದ್ಘಾಟನಾ ಸಮಾರಂಭಕ್ಕೆ ಅಂತರ್‌ರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೆ. 22ರಿಂದ 25ರವರೆಗೆ ಕ್ರೀಡಾಕೂಟ ನಡೆಯಲಿದೆ. ಸೆ. 22ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸಲಿದ್ದು, ಮೇಜರ್ ಧ್ಯಾನ್‌ಚಂದ್ ಖೇಲ್‌ರತ್ನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ವಿನೇಶ್ ಫೋಗಟ್ ಭಾಗವಹಿಸಲಿದ್ದಾರೆ.
ವಿನೇಶ್ ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯಿಯನ್ ಪಂದ್ಯಗಳಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೆೆಬ್ರವರಿ 18, 2019 ರಂದು ನಡೆದ ಲಾರೆನ್ಸ್ ವರ್ಲ್ಡ್ ಚಾಂಪಿಯನ್ ಶಿಪ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ.