×
Ad

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಈ.ಡಿ

Update: 2025-08-23 15:27 IST

ಕೆ.ಸಿ.ವೀರೇಂದ್ರ ಪಪ್ಪಿ Photo Credit: thehindu

ಬೆಂಗಳೂರು : ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್‌ ಕಂಪನಿ ನಡೆಸುತ್ತಿದ್ದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಈ.ಡಿ) ಅಧಿಕಾರಿಗಳು, ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಶನಿವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಶುಕ್ರವಾರ ಕೆ.ಸಿ.ವಿರೇಂದ್ರ ಪಪ್ಪಿಯವರ ಮನೆ ಮತ್ತು ಅವರ ಸಹೋದರರ ನಿವಾಸಗಳ ಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಹಲವು ರಾಜ್ಯಗಳಲ್ಲಿ ನಡೆಸಿದ ದಾಳಿಯಲ್ಲಿ ವಿದೇಶಿ ಕರೆನ್ಸಿ ಸೇರಿದಂತೆ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News