×
Ad

ತುಮಕೂರು | ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಈಡಿ ದಾಳಿ

Update: 2025-05-21 12:10 IST

ತುಮಕೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ಬೆಳಿಗ್ಗೆ ನಡೆಸಿದ್ದಾರೆ.

ತುಮಕೂರು ನಗರದ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ, ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಸಿದ್ಧಾರ್ಥ ನಗರದಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಚೇರಿ ಹಾಗೂ ನೆಲಮಂಗಲದ ಟಿ.ಬೇಗೂರು ಬಳಿಯ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮೇಲೆ ಈಡಿ ದಾಳಿ ಮಾಡಲಾಗಿದೆ.

ಪ್ರತ್ಯೇಕ ಅಧಿಕಾರಿಗಳ ತಂಡವು ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು. 30 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

2019ರಲ್ಲೂ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News