×
Ad

ಸಫೀನಾ ಹುಸೇನ್ ರಿಂದ ಸ್ಥಾಪಿತ 'Educate Girls' ಸಂಸ್ಥೆಗೆ ಮ್ಯಾಗ್ಸೆಸೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಅಭಿನಂದನೆ

Update: 2025-08-31 23:19 IST

Photo credit: AP

ಬೆಂಗಳೂರು: ಶಾಲೆಯಿಂದ ಹೊರಗುಳಿದಿರುವ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಭಾರತದ ಲಾಭರಹಿತ ಸಂಸ್ಥೆ 'Educate Girls'ಗೆ 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯು ಲಭಿಸಿದ್ದು, ಈ ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್‌ರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, "ಶಾಲೆಯಿಂದ ಹೊರಗುಳಿದಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಭಾರತದ 'Educate Girls' ಸಂಸ್ಥೆಯು 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನವಾದ ಸುದ್ದಿ ಕೇಳಿ ಖುಷಿಯಾಯಿತು. ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್‌ರಿಗೆ ಅಭಿನಂದನೆಗಳು." ಎಂದು ಪೋಸ್ಟ್‌ ಮಾಡಿದ್ದಾರೆ.

"ರಾಜಸ್ಥಾನದ ಕುಗ್ರಾಮವೊಂದರಲ್ಲಿ ಬಾಲಕಿಯೊಬ್ಬಳ‌ ಶಿಕ್ಷಣಕ್ಕಾಗಿ ಆರಂಭಗೊಂಡಿದ್ದ "Educate Girls" ಸಂಸ್ಥೆಯು, ಕಾಲ ಕಳೆದಂತೆ ಹೆಮ್ಮರವಾಗಿ ಬೆಳೆದು ಇಂದು ಸಾವಿರಾರು ಶಿಕ್ಷಣ ವಂಚಿತ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿಸಲು ನಿಸ್ವಾರ್ಥ ಶ್ರಮಿಸುತ್ತಿದೆ. ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ 'Educate Girls' ಸಂಸ್ಥೆಯ ಹಿಂದಿರುವ ನಿಸ್ವಾರ್ಥ ಜೀವಗಳಿಗೆ ಈ ಪ್ರಶಸ್ತಿ ಹೊಸ ಸ್ಪೂರ್ತಿ ತುಂಬಲಿದೆ ಎಂದು ಭಾವಿಸಿದ್ದೇನೆ." ಎಂದು ಸಿಎಂ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News