×
Ad

ಶಾಲಾ‌ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ: ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯದಲ್ಲಿ ಸಚಿವರಿಂದ ಚಾಲನೆ

Update: 2023-08-18 16:20 IST

ಮಂಡ್ಯ ಸೆ.18: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿಂದು ಚಾಲನೆ ನೀಡಲಾಯಿತು.

ಕೃಷಿ ಸಚಿವರಾದ. ಎನ್ ಚಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಯೋಜನೆಗೆ ಚಾಲನೆ ನೀಡಿದರು.

ರಾಜ್ಯದ ಎಲ್ಲಾ ಸರ್ಕಾರಿ ,ಅನುದಾನಿ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರೆಡು ದಿನ ಮೊಟ್ಟೆ ,ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ ಕೃಷಿ ಸಚಿವರು ಈ ವರ್ಷ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಪೂರಕ‌ ಪೌಷ್ಟಿಕ ಆಹಾರವಾಗಿ ಸಿರಿಧಾನ್ಯದ ತಿನಿಸುಗಳನ್ನೂ ಸೇರ್ಪಡೆ ಗೊಳಿಸಬೇಕು . ಇದರಿಂದ ರೈತರಿಗೂ ಪ್ರೋತ್ಸಾಹ ಸಿಗಲಿದೆ ಮಕ್ಕಳೂ ಶಕ್ತಿವಂತರಾಗುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News