×
Ad

ಹುಬ್ಬಳ್ಳಿ -ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಸೆ.29ಕ್ಕೆ ಈದ್- ಮಿಲಾದ್ ರಜೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ

Update: 2023-09-26 21:33 IST

ಜಿಲ್ಲಾಧಿಕಾರಿ 

ಧಾರವಾಡ, ಸೆ.26: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಸೆ.29 ಕ್ಕೆ ಆಚರಿಸುತ್ತಿರುವದರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಸೆ.28 ರಂದು ಇರುವ ಸರ್ಕಾರಿ ರಜೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ.

ಈ ಸಂಬಂಧ ಸೆ.29 ಕ್ಕೆ ರಜೆ ಘೋಷಿಸಿ, ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News