×
Ad

ಆಳಂದ ಮತಗಳ್ಳತನ ಪ್ರಕರಣ |ಚುನಾವಣಾ ಆಯೋಗ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ

Update: 2025-10-24 21:16 IST

ಪ್ರಿಯಾಂಕ್ ಖರ್ಗೆ (PTI)

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ಪ್ರಕರಣದ ಎಸ್‍ಐಟಿ ತನಿಖೆ ಮುಗಿದಿಲ್ಲ. ಈ ಸಂಬಂಧ ಚುನಾವಣಾ ಆಯೋಗ ಉತ್ತರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ ಎಂದರು.

ಒಬ್ಬ ಮತದಾರರ ಗುರುತು ಅಳಿಸಲು 80 ರೂ. ತೆಗೆದುಕೊಂಡಿದ್ದಾರೆ ಎನ್ನುವುದು ಗೊತ್ತಾಗಿದೆ. ಈ ಬಗ್ಗೆ ದಾಖಲೆ ಮುಂದಿಟ್ಟು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತೇವೆ. ಅವರೂ ಉತ್ತರ ನೀಡಬೇಕಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News