×
Ad

ಚುನಾವಣೆಯಲ್ಲಿ ಅಕ್ರಮ ಆರೋಪ: ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್

Update: 2025-12-09 21:43 IST

ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ.

ಚುನಾವಣೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಅಶ್ವತ್ಥರಾಮ್ ರಾಥೋಡ್ ಎಂಬವರು ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯ ಮೂರ್ತಿಗಳಾದ ಎಂ. ಎಂ. ಸುಂದರೇಶ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರ ಪೀಠವು ವಿಚಾರಣೆ ನಡೆಸಿ, ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿದೆ.

2023ರ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಿಯಾಂಕ್ ಖರ್ಗೆ ಅವರು ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮವಾಗಿದ್ದು, ಪ್ರಿಯಾಂಕ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News