×
Ad

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Update: 2023-11-10 23:16 IST

ಬಿ.ವೈ ವಿಜಯೇಂದ್ರ

ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕೇಂದ್ರದಿಂದ ವೀಕ್ಷರು ರಾಜ್ಯಕ್ಕೆ ಆಗಮಿಸುತ್ತಾರೆ. ಅದೇ ದಿನ  ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಯಡಿಯೂರಪ್ಪ ಅವರು ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ '' ಎಂದರು.

‘ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನನ್ನನ್ನು ನೇಮಕ ಮಾಡುವ ಮೂಲಕ ವರಿಷ್ಠರು ಭರವಸೆಯನ್ನಿಟ್ಟು ಉನ್ನತ ಸ್ಥಾನವನ್ನು ನೀಡಿದ್ದಾರೆ. ಪಕ್ಷದ ರಾಜ್ಯದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೆಲ್ಲರ ಸಲಹೆ-ಸೂಚನೆಗಳನ್ನು ಆಧರಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸುವೆ. ರಾಜ್ಯಾಧ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಗಟ್ಟಿಗೊಳಿಸುವುದರ ಜೊತೆಗೆ ಮುಂಬರಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ’

-ಬಿ.ವೈ.ವಿಜಯೇಂದ್ರ ಬಿಜೆಪಿ ನೂತನ ರಾಜ್ಯಾಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News