×
Ad

ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ; ಮೂರು- ನಾಲ್ಕು ದಿನಗಳಲ್ಲಿ ನನ್ನ ಪ್ರವಾಸ ಪ್ರಾರಂಭ: ಬಿ.ಎಸ್. ಯಡಿಯೂರಪ್ಪ

Update: 2023-09-07 16:51 IST

ಬೆಂಗಳೂರು: ʼʼಶೀಘ್ರದಲ್ಲೇ ಪಕ್ಷದ ವರಿಷ್ಠರು ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ. ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಮೂರು- ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆʼʼ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼವಿರೋಧ ಪಕ್ಷದ ನಾಯಕ ಇಲ್ಲ ಅಂತಾ, ವಿಪಕ್ಷ ವಾಗಿ ಕೆಲಸ ಗಳು ನಿಂತಿಲ್ಲ. ನಾನು ನಿಮಗೊಂದು ಮಾತು ಹೇಳುತ್ತೇನೆ, ಇವತ್ತಿಂದ ಯಡಿಯೂರಪ್ಪ ಮನೆಯಲ್ಲಿ ಕುಳಿತು ಕೊಳ್ಳುವುದಿಲ್ಲ, ನನ್ನ ಪ್ರವಾಸ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ರಾಜ್ಯ ಪ್ರವಾಸ ಮಾಡಿ ಬರುವ ಲೋಕಸಭಾ ಚುನಾವಣೆ ಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆʼʼ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ʼʼಒಟ್ಟಾಗಿ ಪಕ್ಷ ಕಟ್ಟಿ ಬೆಳೆಸಬೇಕಿದೆʼʼ

ʼʼರೇಣುಕಾಚಾರ್ಯ ಅವರನ್ನು ಕರೆದು ಮಾತಾಡಿದ್ದೇನೆ, ಯಾರು ಯಾವುದಕ್ಕೂ ಕಾರಣರಲ್ಲ. ನಾವೆಲ್ಲರೂ ಒಟ್ಟಾಗಿ ಪಕ್ಷ ಕಟ್ಟಿ ಬೆಳೆಸಬೇಕಿದೆ. ಅದರ‌ ಬಗ್ಗೆ ಗಮನ ಕೊಡಬೇಕು, ಆ ದಿಕ್ಕಿನಲ್ಲಿ ನಾವು ಕೆಲಸ ಮಾಡಬೇಕಿದೆʼʼ ಎಂದು ಇದೇ ವೇಳೆ ಯಡಿಯೂರಪ್ಪ ಅವರು ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News