ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಆಘಾತ: ಲೈನ್ ಮ್ಯಾನ್ ಮೃತ್ಯು
Update: 2023-09-24 18:50 IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ದುರಸ್ತಿ ಕಾರ್ಯದ ಸಂದರ್ಭ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟಿರುವ ಘಟನೆ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾ ಸಮೀಪ ವರದಿಯಾಗಿದೆ.
ಲೈನ್ ಮ್ಯಾನ್ ನಲ್ಲೂರಿನ ಕಿರಣ್ ವಿದ್ಯುತ್ ಶಾಕ್ ತಗುಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ರಿಪೇರಿ ಕಾರ್ಯಕ್ಕಾಗಿ ಕಿರಣ್ ವಿದ್ಯುತ್ ಕಂಬದ ಮೇಲೆ ಹತ್ತಿದ್ದರು. ಈ ವೇಳೆ ವಿದ್ಯುತ್ ಶಾಕ್ ತಗುಲಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೋರು ಶಬ್ದವಾಗಿದ್ದರಿಂದ ಸಮೀಪದ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಸ್ಥಳಕ್ಕೆ ದೌಡಾಯಿಸಿದ್ದರು. ಆ್ಯಂಬುಲೆನ್ಸ್ ಗೆ ಕರೆಯಿಸಿ ಕಿರಣ್ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆ ಹೊತ್ತಿಗಾಗಲೆ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗುತ್ತಿದೆ.