ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಸ್ಥಳಾಂತರ ವಿಚಾರವಾಗಿ ನಾವು ಅರಣ್ಯ ಸಚಿವರ ಆದೇಶವನ್ನು ಪಾಲನೆ ಮಾಡುತ್ತಿದ್ದೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಶಾಸಕಿ ನಯನಾ ಮೋಟಮ್ಮ ಅವರೊಂದಿಗೆ ನಿನ್ನೆ ರಾತ್ರಿಯೆ ಈ ವಿಚಾರವಾಗಿ ಮಾತನಾಡಿದ್ದೇನೆ. ರಾಜೀನಾಮೆ ನೀಡುವುದು ಅವರ ಇಚ್ಛೆ. ಆದರೆ, ಇದರಲ್ಲಿ ರಾಜಕಾರಣ ಮಾಡುವುದು ಒಳ್ಳೆಯದಲ್ಲ ಎಂದು ಹೇಳಿದರು.

ನಮ್ಮ ಭಾಗದಲ್ಲಿ ಅರಣ್ಯ ಪ್ರದೇಶವಿಲ್ಲ. ಆನೆಗಳು ಬಂದು ಬಿಟ್ಟಿವೆ. ರೈತರ ಜಮೀನಿನಲ್ಲಿ ಆನೆಗಳನ್ನು ಮೇಯಲು ಬಿಡಲು ಸಾಧ್ಯವೆ? ಆ ಆನೆಗಳನ್ನು ಭದ್ರಾ ಅಭಯಾರಣ್ಯದಲ್ಲಿ ಬಿಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಆದುದರಿಂದ, ಚಿಕ್ಕಮಗಳೂರು ಮಾರ್ಗವಾಗಿಯೆ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಬೇಕಿದೆ ಎಂದು ಶಿವಲಿಂಗೇಗೌಡ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳನ್ನು ಬಿಟ್ಟು ಬಿಡುತ್ತಾರೆ ಎಂಬ ಆತಂಕ ಅವರಲ್ಲಿ ಇರಬೇಕು. ಆದರೆ, ಹಾಗೇನು ಇಲ್ಲ. ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿರುವ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಬಿಡಲಾಗುವುದು. 15 ದಿನಗಳ ಕಾಲ ಸ್ವಲ್ಪ ಸಮಸ್ಯೆ ಆಗಬಹುದು ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.