×
Ad

ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದು: ಡಿಕೆ ಶಿವಕುಮಾರ್

Update: 2025-09-15 22:51 IST

ಬೆಂಗಳೂರು: ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದರು.

ಸೋಮವಾರ ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ಕೆ.ಆರ್.ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಸರ್.ಎಂ.ವಿಶ್ವೇಶ್ವರಯ್ಯರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ ಎಂದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಸಿ) ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್‍ಗಳ ಜೊತೆ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ನಾನು ನಗರಾಭಿವೃದ್ಧಿ ಹಾಗೂ ಇಂಧನ ಸಚಿವನಾಗಿದ್ದಾಗಲೂ ಕೆಲಸ ಮಾಡಿದ್ದೆ. ಇಂಜಿನಿಯರ್‍ಗಳು ದೇಶ ನಿರ್ಮಿಸುವವರು ಎಂದು ಶಿವಕುಮಾರ್ ಹೇಳಿದರು.

ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕೆಂದು ಬಯಸಿದ್ದರು. ಆದರೆ, ನಾನು ಸರಿಯಾಗಿ ಓದಲಿಲ್ಲ. ನಮ್ಮ ತಂದೆ ಆಸೆ ಈಡೇರಿಸಬೇಕೆಂದು ಇಂಜಿನಿಯರಿಂಗ್ ಕಾಲೇಜು ಆರಂಭಿಸಿದೆ. ನಮ್ಮ ಮನೆಯಲ್ಲಿ ಇಬ್ಬರು ಮಕ್ಕಳು ಇಂಜಿನಿಯರ್. ಒಬ್ಬರು ಸಿವಿಲ್ ಇಂಜಿನಿಯರ್ ಮತ್ತೊಬ್ಬರು ಇಲೆಕ್ಟ್ರಿಕಲ್ ಇಂಜಿನಿಯರ್ ಎಂದು ಶಿವಕುಮಾರ್ ನೆನಪು ಮಾಡಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News