×
Ad

984 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

Update: 2025-10-31 22:21 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ರಾಜ್ಯದಲ್ಲಿರುವ 984 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೆ ಸಾಲಿನಿಂದ ಪ್ರಸ್ತುತ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ(ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರಕಾರ ಅನುಮತಿ ನೀಡಿದೆ.

ಶುಕ್ರವಾರ ಸರಕಾರ ಆದೇಶ ಹೊರಡಿಸಿದ್ದು, ಶಾಲೆಯಲ್ಲಿ ತರಬೇತಿ ಪಡೆದ ಶಿಕ್ಷಕರು ಲಭ್ಯವಿದ್ದಲ್ಲಿ ಸದರಿ ಶಿಕ್ಷಕರೇ ಆಂಗ್ಲ ಮಾಧ್ಯಮವನ್ನು ಬೋಧಿಸುವಂತೆ ಕ್ರಮವಹಿಸಬೇಕು ಎಂದು ಶಿಕ್ಷಣ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News