×
Ad

ಈಶ್ವರಪ್ಪ ʻರಿಟೈರ್ಡ್ʻ ರಾಜಕಾರಣಿ: ಕಾಂಗ್ರೆಸ್ ಲೇವಡಿ

Update: 2023-11-13 19:10 IST

ಕೆ.ಎಸ್.ಈಶ್ವರಪ್ಪ

ಬೆಂಗಳೂರು: ರಿಟೈರ್ಡ್ ರಾಜಾಕಾರಣಿ ಕೆ.ಎಸ್.ಈಶ್ವರಪ್ಪ ಅವರೇ, ಇದೆಂತಹಾ ದುಸ್ಥಿತಿ ನಿಮ್ಮದು, ಬಿಜೆಪಿ ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿತು, ನಿಮ್ಮನ್ನು ಸಿಎಂ ಮಾಡದೆ ವಂಚಿಸಿತು, ಕೊನೆಗೆ ಟಿಕೆಟ್ ನಿರಾಕರಿಸಿ ರಾಜಕೀಯ ಭವಿಷ್ಯವನ್ನೂ ಕಸಿಯಿತು’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸೋಮವಾರ ಎಕ್ಸ್(ಟ್ವಿಟರ್)ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ಈಗ ಯಡಿಯೂರಪ್ಪನವರ ಮಗ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ ಈಗ, ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ’ ಎಂದು ಲೇವಡಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News