×
Ad

ಕಲಬುರಗಿ: ಕಂಪೆನಿಯ ಆಡಳಿತ ಅಧಿಕಾರಿಗಳ ಕಿರುಕುಳ ಆರೋಪ; ಮಾಜಿ ಶಾಸಕನ ಅಳಿಯ ಆತ್ಮಹತ್ಯೆ

Update: 2023-12-07 12:26 IST

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಒಡೆತನದ ಎಸಿಸಿ ಸಿಮೆಂಟ್ ಕಂಪನಿಯಲ್ಲಿ ಇಂಜಿನಿಯರಿಂಗ್ ಆಗಿ ಸೇವೆ ಸಲ್ಲಿಸುತ್ತಿದ್ದ  ವ್ಯಕ್ತಿಯೊಬ್ಬರು ಕಂಪನಿ ಆಡಳಿತ ಅಧಿಕಾರಿಗಳು ನೀಡಿದ ಮಾನಸಿಕ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ವ್ಯಕ್ತಿಯನ್ನು ವಾಡಿ ಪಟ್ಟಣದ ಎಸಿಸಿ ಕಾಲೋನಿಯ ರಮೇಶ್‌ ಪವಾ‌ರ್ (45) ಎಂದು ಗುರುತಿಸಲಾಗಿದೆ. ಇವರು ಚಿತ್ತಾಪುರ ಮತಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ನಾಯಕ ದಿವಂಗತ ವಾಲ್ಮೀಕಿ ನಾಯಕ ಅವರ ಮಗಳ ಪತಿ. ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‌ಸಾಯುವ ಮುನ್ನ ವಿಡಿಯೋ ರೆಕಾರ್ಡ್ ಮಾಡಿರುವ ರಮೇಶ್‌ ಪವಾ‌ರ್ ಎಸಿಸಿ ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನನ್ನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕ್ಷೇತ್ರದ ಶಾಸಕ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News