×
Ad

ನಾನು ಆರೋಗ್ಯವಾಗಿದ್ದೇನೆ: ಎಚ್.ಡಿ. ದೇವೇಗೌಡ ಸ್ಪಷ್ಟನೆ

Update: 2024-02-15 22:32 IST

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುವಾರ ಸಂಜೆ ವರದಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ದೇವೇಗೌಡ ಅವರು ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

ತನ್ನ ಆರೋಗ್ಯದ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಚ್‌.ಡಿ. ದೇವೇಗೌಡ ಅವರು, “ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ವರದಿಗಳು ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದು ನನಗೆ ತಿಳಿದಿದೆ. ನಾನು ವಾಡಿಕೆಯಂತೆ ಇಂದೂ ಕೂಡಾ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತೇನೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News