×
Ad

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ 420 ಹುದ್ದೆಗಳಿಗೆ ಸೆ.10 ರಂದು ಪರೀಕ್ಷೆ

Update: 2023-08-26 18:28 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.26: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 420 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಸೆ.10 ರಂದು ಬೆಳಗ್ಗೆ 11 ರಿಂದ 12:30ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಲಿಖಿತ ನಡೆಯಲಿದೆ.

ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರದ ಬಗ್ಗೆ ಎಸ್‍ಎಮ್‍ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಪ್ರವೇಶ ಪತ್ರದ ಲಿಂಕ್‍ನ್ನು ಸಹ ಕಳುಹಿಸಲಾಗುವುದು, ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗಳಿಗೆ ಹಾಜರಾಗಬೇಕೆಂದು ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News