×
Ad

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ಅರ್ಜಿ ವಜಾ ಮಾಡಿದ ಕೋರ್ಟ್

Update: 2024-03-22 22:07 IST

ಬೆಂಗಳೂರು : ಜೆಡಿಎಸ್‌ ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಕ್ರಮ ಹಾಗೂ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನನು ನೇಮಕವನ್ನು ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ಅವರ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ.ದೇವೇಗೌಡ ಅವರು ನಿಯಮಗಳಿಗೆ ವಿರುದ್ಧವಾಗಿ ತಮ್ಮನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದರು ಎಂದು ಇಬ್ರಾಹಿಂ ಅವರು ದೂರಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದಿಂದ ಇಬ್ರಾಹಿಂ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಅವರು ಉಚ್ಚಾಟನೆ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News