×
Ad

ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ಬುಕ್ ಮಾಡಲು ಅವಕಾಶ

Update: 2026-01-12 19:03 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಪ್ರಯಾಣಿಸುವವರು ಮುಂಗಡ ಬಸ್ ಟಿಕೆಟ್‍ಗಳನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಬುಕ್ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಕೆಎಸ್ಸಾರ್ಟಿಸಿ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‍ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್‍ಆರ್‌ಟಿಸಿ ವೆಬ್‍ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್‍ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್‍ಗಳನ್ನು ಬುಕ್ ಮಾಡಬಹುದು.

ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯವು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ. ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ ಲಭ್ಯವಿದೆ.

ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್ಸಾರ್ಟಿಸಿ ಕರೆ ಕೇಂದ್ರವನ್ನು 080-2625 2625 ಅಥವಾ 77609 90034, 77609 90035 ಅಥವಾ ಬೆಂಗಳೂರು-ಒನ್ ಕರೆ ಕೇಂದ್ರ 080-4920 3888 ಸಂಪರ್ಕಿಸಬಹುದು ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News