×
Ad

ಹಬ್ಬಕ್ಕೆ ತಾವರೆ ಹೂವು ಕೀಳಲು ಕೆರೆಗೆ ಇಳಿದಿದ್ದ ತಂದೆ–ಮಗ ಮೃತ್ಯು

Update: 2023-08-24 09:56 IST

ಚಿತ್ರ- ಅಗ್ನಿಶಾಮಕದಳದ ಸಿಬ್ಬಂದಿ  

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಮಾರಾಟಕ್ಕಾಗಿ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ-ಮಗ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಭೂಚನಹಳ್ಳಿ ಬಳಿ ಬುಧವಾರ ವರದಿಯಾಗಿದೆ. 

ಮೃತರನ್ನು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು (55), ಅವರ ಪುತ್ರ ಕೇಶವ್ (18) ಎಂದು ಗುರುತಿಸಲಾಗಿದೆ.

ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಕೀಳಲು ಮುಂದಾದ ವೇಳೆ ಅವಘಡ ಸಂಭವಿಸಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಇಂದು (ಗುರುವಾರ) ಬೆಳಗ್ಗೆ ಅಗ್ನಿಶಾಮಕದಳದ ಸಿಬ್ಬಂದಿ ಕೆರೆಯಿಂದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News