ಬೆಂಗಳೂರು : ರಾಜ್ಯ ಸರಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಬಹುತೇಕ ಶುಕ್ರವಾರ(ನ.20) ಪ್ರಕಟವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನಕ್ಕೆ ಸಂಬಂಧಿಸಿದಂತೆ ಮೀಸಲು ನಿಗದಿ ಮಾಡಿ ಅಕ್ಟೋಬರ್ 9ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು ಎಂದು ತಿಳಿಸಿದರು.

ಇದಾದ ನಂತರ, ಅ.19ರವರೆಗೆ ನಿಯಮಾನುಸಾರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಒಟ್ಟು 2900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಗ್ರಾಮ ಪಂಚಾಯತಿ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಈ ಎಲ್ಲ ಆಕ್ಷೇಪಣೆಗಳನ್ನೂ ಪರಿಶೀಲಿಸಿ ಕ್ಷೇತ್ರಗಳ ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ನ.20ರಂದು ಅಧಿಸೂಚನೆ ಪ್ರಕಟಿಸಲಾಗುವುದು ಎಂದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು\ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.