ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ; ಸರಕಾರಕ್ಕೆ ಅಂತಿಮ ವರದಿ ಸಲ್ಲಿಕೆ
Update: 2025-12-31 17:55 IST
ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.