×
Ad

ದೇಶ ವಿಭಜನೆಯ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು

Update: 2024-02-09 22:21 IST

ಕೆ.ಎಸ್. ಈಶ್ವರಪ್ಪ

ದಾವಣಗೆರೆ: ದೇಶ ವಿಭಜನೆಯ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ನಗರದ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹನುಮಂತ ಎಂಬವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಈಶ್ವರಪ್ಪ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News