×
Ad

ರನ್ಯಾ ರಾವ್ ವಿರುದ್ಧ ಅವಹೇಳನಾಕಾರಿ ಪದಬಳಕೆ ಆರೋಪ : ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ಎಫ್ ಐಆರ್

Update: 2025-03-18 21:46 IST

ಬೆಂಗಳೂರು : ಅಕ್ರಮ ಚಿನ್ನ ಸಾಗಾಣಿಕೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರನ್ಯಾ ರಾವ್ ವಿರುದ್ಧ ಅವಾಚ್ಯ ಪದ ಬಳಸಿ ತೇಜೋವಧೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ ಪೊಲೀಸರಿಗೆ ಅನುರಾಧ ಎಂಬುವರು ದೂರು ನೀಡಿದ್ದಾರೆ.

ಈ ದೂರು ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್ನೂ, ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News