×
Ad

ಸರ್ಕಾರ ಉರುಳಿಸಲು 1000 ಕೋಟಿ ರೂ. ಸಂಗ್ರಹ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ಪ್ರಕರಣ ದಾಖಲು

Update: 2024-10-17 23:42 IST

ದಾವಣಗೆರೆ: ರಾಜ್ಯದ ಕಾಂಗ್ರೆಸ್‌ ಸರಕಾರವನ್ನು ಉರುಳಿಸಲು ನಾಯಕರೊಬ್ಬರು 1,000 ಕೋಟಿ ರೂ. ತೆಗೆದಿಟ್ಟಿದ್ದಾರೆ ಎಂದು ಆರೋಪ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಮನೋಹರ್‌ ಅವರು ನೀಡಿದ ದೂರಿನನ್ವಯ ಗಾಂಧಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1,000 ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಆ ಹಣವನ್ನು ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ್ದಾರೆ ಎಂದು ಯತ್ನಾಳ್‌ ಆರೋಪಿಸಿದ್ದರು.

Full View


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News