×
Ad

ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲು

Update: 2024-04-28 15:52 IST

ಹಾಸನ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ರ ಅಡಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣವು ಗಂಭೀರ ಸ್ವರೂಪ ಪಡೆದಿದ್ದು, ಶೀಘ್ರವೇ ತನಿಖಾ ತಂಡ ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ.

ಎಸ್.ಐ.ಟಿ ರಚನೆ

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಿ ಅಧಿಕಾರಿಗಳನ್ನು ನೇಮಿಸಿದೆ.

ಇಂದು (ಎ.28) ಸರ್ಕಾರವು ಹೊರಡಿಸಿರುವ ವಿಶೇಷ ನಡಾವಳಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಬಿಜಯ್‌ ಕುಮಾರ್‌ ಸಿಂಗ್‌,ಸುಮನ್‌ ಡಿ. ಪನ್ಸೇಕರ್‌ ಮತ್ತು ಸೀಮಾ ಲಾಟ್ಕರ್‌ ಅವರನ್ನು ತನಿಖೆಗೆ ನೇಮಿಸಿರುವುದಾಗಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News