×
Ad

ಝಮೀರ್‌ ಅಹ್ಮದ್‌ ವಿರುದ್ದ ಅವಹೇಳನಾಕಾರಿ ಪದಬಳಕೆ : ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲು

Update: 2024-11-13 19:57 IST

 ಪುನೀತ್ ಕೆರೆಹಳ್ಳಿ

ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಾಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಇಲ್ಲಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಸಚಿವ ಝಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ನ.11ರಂದು ಪುನೀತ್ ಕೆರೆಹಳ್ಳಿ ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್‍ನಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪುನೀತ್ ಕೆರೆಹಳ್ಳಿ ಧರ್ಮ-ಧರ್ಮಗಳ ನಡುವೆ ದ್ವೇಷ ಬಿತ್ತುವ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಪದೇ ಪದೇ ಅವಾಚ್ಯ ಶಬ್ದಗಳಿಂದ ಸಚಿವರನ್ನು ನಿಂದಿಸಿದ್ದ, ಜತೆಗೆ ಪ್ರಾಣ ಬೆದರಿಕೆ ಸಹ ಹಾಕಿದ್ದಾರೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಬಿ.ಎಸ್. ಅಶೋಕ್ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News