ಮೀಸಲಾತಿ ಬಗ್ಗೆ ಅವಹೇಳನ ಆರೋಪ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್‍ಐಆರ್ ದಾಖಲು

Update: 2026-08-13 18:34 IST

 ಅರುಣ್ ಬಡಿಗೇರ್

ಬೆಂಗಳೂರು : ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ನಿರೂಪಕ ಅರುಣ್ ಬಡಿಗೇರ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಮೀಸಲಾತಿ ಹಾಗೂ ಮೀಸಲಾತಿ ಫಲಾನುಭವಿಗಳ ಕುರಿತು ಅವಹೇಳನಕಾರಿ, ಪೂರ್ವಾಗ್ರಹಪೀಡಿತ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆ ಹಾಗೂ ತಪ್ಪು ಅಭಿಪ್ರಾಯಗಳನ್ನು ಉಂಟುಮಾಡುವ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಹೀಗಾಗಿ ನಿರೂಪಕ ಅರುಣ್ ಬಡಿಗೇರ್ ಹಾಗೂ ಖಾಸಗಿ ವಾಹಿನಿಯ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ನೆಲಮಂಗಲದ ನಿವಾಸಿ ಅನಂತಕುಮಾರ್ ಡಿ.ಆರ್. ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ನೆಲಮಂಗಲ ಗ್ರಾಮಾಂತರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ(ಬಿಎನ್‍ಎಸ್) 196(1), 353(1), 353(2) ಅಡಿ ಎಫ್‍ಐಆರ್ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News