ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲು
ಎನ್.ರವಿಕುಮಾರ್
ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನಂದಾದೀಪಾ ಮಹಿಳಾ ಸಂಘದ ಅದ್ಯಕ್ಷೆ ನಾಗರತ್ನ ಎಂಬವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.
ಎಫ್‌ಐಆರ್‌ನಲ್ಲಿ ಏನಿದೆ :
‘ಬಿಜೆಪಿ ವತಿಯಿಂದ ಜುಲೈ 1ರಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ಬಳಿಕ ಎನ್.ರವಿಕುಮಾರ್ ಅವರು ಶಾಲಿನಿ ರಜನೀಶ್ ಅವರ ಕುರಿತು ಅವಹೇಳನಕಾರಿ ಪದ ಬಳಸಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯು ಮುಖ್ಯಕಾರ್ಯದರ್ಶಿ ಹುದ್ದೆಗೆ ಅಗೌರವ ತಂದಿದೆ. ಶಾಲಿನಿ ಅವರ ಗೌರವಕ್ಕೆ ಕುಂದು ಉಂಟು ಮಾಡಿ ಇಡೀ ಮಹಿಳಾ ಕುಲಕ್ಕೆ ಅಗೌರವ ತೋರಿದಂತೆ ಆಗಿದೆ. ರವಿಕುಮಾರ್ ಅವರ ಮಾತು ಲೈಂಗಿಕ ಅರ್ಥ ಛಾಯೆ ಬರುವ ಮಾತಾಗಿದೆ. ಮುಖ್ಯಕಾರ್ಯದರ್ಶಿಯವರ ಖ್ಯಾತಿಗೆ ಹಾನಿ ಉಂಟು ಮಾಡಿದೆ’ ಎಂಬ ದೂರು ಆಧರಿಸಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.