ಸಾಂದರ್ಭಿಕ ಚಿತ್ರ

ಬೆಂಗಳೂರು : ಬಂಗಾಳ ಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ನಿರಂತರ ರಾಜ್ಯದ ಹಲವೆಡೆ ಮಳೆ ಬರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಸೆ.25ರ ವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.

ಪ್ರಮುಖವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಂಗಳೂರು ಹಾಗೂ ಬೆಂ.ಗ್ರಾಮಾಂತರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor