×
Ad

ಐದು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2025-09-09 18:47 IST

ಬೆಂಗಳೂರು, ಸೆ.9 : ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ನವೀನ್ ಕುಮಾರ್ ರಾಜು ಎಸ್. ಅವರನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ), ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ದಲ್ಜೀತ್ ಕುಮಾರ್ ಅವರನ್ನು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಕಾರ್ಯದರ್ಶಿ ಡಿ.ರಣದೀಪ್ ಅವರನ್ನು ಗ್ರಾಮೀಣ ಕುಡಿಯುವ ನೀರು ಹಾಗೂ ಒಳಚರಂಡಿ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕವಿತಾ ಎಸ್.ಮಣ್ಣಿಕೇರಿ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ ವರ್ಗಾವನೆ ಮಾಡಲಾಗಿದೆ.

ಗ್ರಾಮೀಣ ಕುಡಿಯುವ ನೀರು ಹಾಗೂ ಒಳಚರಂಡಿ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಕೆ. ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News