ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2026-08-19 23:58 IST

ಬೆಂಗಳೂರು: ರಾಜ್ಯ ಸರಕಾರವು ಐವರು ಹಿರಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲೆಯ ವಿಶೇಷ ಭೂಸ್ವಾಧೀನಾಧಿಕಾರಿ ಸೌಮ್ಯಾ ಎನ್.ಗೌಡ ಅವರನ್ನು ಕಂದಾಯ ಇಲಾಖೆ ಭೂಸ್ವಾಧೀನ, ಪುನರ್ ವಸತಿ, ಹಾಗೂ ಪುನರ್ ನಿರ್ಮಾಣದ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ತುಮಕೂರು ನಗರಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಬಸ್ಸುಮ್ ಝಾಹೆರಾ ಅವರನ್ನು ತುಮಕೂರಿನ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿ ಸೋಮಪ್ಪ ಕಡಕೊಳ ಅವರನ್ನು ತುಮಕೂರು ನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ಕಾರ್ಯದರ್ಶಿ ವಿಜಯಕುಮಾರ್ ಎಂ.ಅಜೂರ್ ಅವರನ್ನು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ವರ್ಗಾವಣೆ ಮಾಡಲಾಗಿದೆ. ಆದರೆ, ಕುಲಸಚಿವರಾಗಿದ್ದ ಶಂಕರಗೌಡ ಸೋಮನಾಳ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸದೆ ವರ್ಗಾಯಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News