ಹವಾಮಾನ ವೈಪರೀತ್ಯ: ದಿಲ್ಲಿ ಬದಲು ಜೈಪುರದಲ್ಲಿ ಇಳಿದ ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ
Update: 2026-05-28 20:32 IST
ಬೆಂಗಳೂರು: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದಿಲ್ಲಿ ಬದಲು ಜೈಪುರದಲ್ಲಿ ಇಳಿದಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದರು.
ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿದ್ದರಾಮಯ್ಯ ತಮ್ಮ ಆಪ್ತರ ಜತೆಗೆ ಹೊಸದಿಲ್ಲಿಗೆ ತೆರಳಿದ್ದರು.
ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ವಿಮಾನದಲ್ಲಿ ಇದ್ದರು.