×
Ad

30 ವರ್ಷದಲ್ಲೇ ಮೊದಲ ಬಾರಿಗೆ ಶಿಕಾರಿಪುರದ ತರಲಘಟ್ಟ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

Update: 2023-11-22 16:53 IST

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. 30 ವರ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ ಸೇರಿದೆ.

ಗ್ರಾಮ ಪಂಚಾಯತ್‌  ಒಟ್ಟು16 ಸದಸ್ಯರ ಬಲ ಹೊಂದಿದೆ. ಒಟ್ಟು 16 ಸದಸ್ಯರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 8 ಸದಸ್ಯರ ಸಮಬಲ ಹೊಂದಿದ್ದವು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 14 ಸದಸ್ಯರು ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವು ಗ್ರಾಮ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಅಧ್ಯಕ್ಷರಾಗಿ ಮಂಜಮ್ಮ ಜ್ಞಾನೇಶ್ ಹಾಗೂ ಉಪಾಧ್ಯಕ್ಷರಾಗಿ ಕುಮಾರ್ ನಾಯ್ಕ ಆಯ್ಕೆಯಾದರು.ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಶಾಸಕರಾಗಿ ಪ್ರತಿನಿಧಿಸುವ ಶಿಕಾರಿಪುರ ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆದಿದೆ. ಇದು ಬಿಜೆಪಿಗೆ ಮೊದಲ ಸೋಲು ಎಂದು ವಿಶ್ಲೇಷಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News