×
Ad

ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ಆರೋಪ: ವಿದೇಶಿ ಪ್ರಜೆ ಬಂಧನ

Update: 2023-08-21 18:50 IST

ಬೆಂಗಳೂರು, ಆ.21: ವಿಮಾನದಲ್ಲಿ ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ವ್ಯಕ್ತಿಯೊಬ್ಬನನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಮಾಲ್ಡೀವ್ಸ್ ಮೂಲದ ಅಕ್ರಂ ಅಹ್ಮದ್ (51) ಬಂಧಿತ ಆರೋಪಿ. 33 ವರ್ಷದ ಗಗನಸಖಿ ನೀಡಿದ ದೂರಿನ ಅನ್ವಯ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ಆ.18ರಂದು ಮಾಲ್ಡೀವ್ಸ್‍ನ ಮಾಲೆಯಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಆರೋಪಿಯು ಗಗನಸಖಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಇತರ ಇಬ್ಬರು ಮಹಿಳಾ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.

ಈ ವಿಚಾರವನ್ನು ಗಗನಸಖಿಯರು ಪೈಲಟ್‍ಗೆ ಮಾಹಿತಿ ನೀಡಿದ್ದು, ಆತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಬ್ಯುಸಿನೆಸ್ ವೀಸಾದಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News