ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆ ಬಾವಿ ತಡೆಗಟ್ಟಲು ವಿಶೇಷ ತಂಡ ರಚನೆ
Update: 2023-11-12 12:35 IST
Photo Credit - @KarnatakaVarthe
ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಯಲಾಗುತ್ತಿದ್ದು, ಇವುಗಳ ತಡೆಗೆ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಲಾಗಿದೆ.
ಈ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಮಾಹಿತಿ ನೀಡಿದ್ದಾರೆ.
'ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರದೇಶದಲ್ಲಿ ನಿಯಮಿತವಾಗಿ ತಪಾಸಣೆ ನಡೆಸುವಂತೆ ವಿಶೇಷ ತಂಡಕ್ಕೆ ಸೂಚಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಧಾನ ಮುಖ್ಯ ಇಂಜಿನಿಯರ್ ಗೂ ತಮ್ಮ ಅಧೀನದ ಅಧಿಕಾರಿಳಿಗೆ ಸೂಚನೆ ನೀಡುವಂತೆ ಸೂಚಿಸಲಾಗಿದೆ. ಅಲ್ಲದೇ, ರಾಜ್ಯಾದ್ಯಂತ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಸುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು' ಸಚಿವ ಭೋಸರಾಜು ತಿಳಿಸಿದ್ದಾರೆ.