×
Ad

ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ

Update: 2023-10-12 12:58 IST

ಬೆಂಗಳೂರು: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತ ವೇಗ ಪಡೆದುಕೊಂಡಿದ್ದು, ಇಂದು (ಗುರುವಾರ) ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ರಾಮಪ್ಪ ಲಮಾಣಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. 

ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಪಕ್ಷಕ್ಕೆ ಸೇರ್ಪಡೆಗೊಂಡ ರಾಮಪ್ಪ ಲಮಾಣಿ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ ಬರಮಾಡಿಕೊಂಡರು.

ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ʼʼಉತ್ತರ ಕರ್ನಾಟಕ ಭಾಗದ ಮಾಜಿ ಶಾಸಕರಿಗೆ ಜಗದೀಶ್ ಶೆಟ್ಟರ್ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನ ಪಕ್ಷಕ್ಕೆ ಸೇರಲಿದ್ದಾರೆ. ಬಿಜೆಪಿ ಮುಂದಿನ ದಿನಗಳಲ್ಲಿ ನೆಲ ಕಚ್ಚಲಿದೆ, ಬಿಜೆಪಿ ಈಗ ನಾಯಕರೇ ಇಲ್ಲದ ಪಕ್ಷ. ಚುನಾವಣೆಯಲ್ಲಿ 40 ಸ್ಥಾನಕ್ಕೆ ಕುಸಿಯುತ್ತಿತ್ತು ಆದರೆ ಕಡಿಮೆ ಅಂತರದಲ್ಲಿ 15-20 ಜನರು ಗೆದ್ದಿದ್ದಾರೆʼʼ ಎಂದು ಹೇಳಿದರು. 





Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News