×
Ad

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್‌

Update: 2023-07-20 17:07 IST

ಶಿವಮೊಗ್ಗ, ಜು.20: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯವು ಈ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲಿದೆ. 

ಕೃಷಿ ಮತ್ತು ತೋಟಗಾರಿಗೆ ವಿವಿಯ ಎಂಟನೇ ಘಟಿಕೋತ್ಸವ ಜು.21ರಂದು ಇರುವಕ್ಕಿಯಲ್ಲಿರುವ ವಿವಿಯ ಮುಖ್ಯ ಆವರಣದಲ್ಲಿ ನಡೆಯಲಿದೆ.

ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದು, ಈ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪತ್ರಿಕಾಗೋಷ್ಟಿಯಲ್ಲಿ ವಿವಿಯ ಕುಲಪತಿ ಡಾ.ಆರ್.ಸಿ ಜಗದೀಶ್ ತಿಳಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಡಾ. ಕೆ.ಸಿ. ಶಶಿಧರ್, ವಿಸ್ತರನಾ ನಿರ್ದೇಶಕ ಡಾ. ಗುರುಮೂರ್ತಿ ಇದ್ದರು. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News