×
Ad

ಮಾಜಿ ಸಿಎಂ ವೀರೇಂದ್ರ ಪಾಟೀಲ್‌ ಅವರ ಪತ್ನಿ ಶಾರದಾ ಪಾಟೀಲ್ ನಿಧನ

Update: 2023-09-26 10:21 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ್‌ ಅವರ ಪತ್ನಿ ಶಾರದಾ ಪಾಟೀಲ್ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ. 

ಅವರಿಗೆ 93 ವರ್ಷ ವಯಸ್ಸಾಗಿತ್ತು. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು.

ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News