ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಜಿ ಉಪ ನಿರ್ದೇಶಕ ಜೆ.ಎಂ.ನಿಸಾರ್ ಅಹ್ಮದ್ ನಿಧನ
Update: 2026-01-02 23:00 IST
ಬೆಂಗಳೂರು, ಜ.2: ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಜಿ ಉಪ ನಿರ್ದೇಶಕ ಜೆ.ಎಂ.ನಿಸಾರ್ ಅಹ್ಮದ್(80) ವಯೋ ಸಹಜ ಅನಾರೋಗ್ಯದಿಂದಾಗಿ ಇಂದಿರಾ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
ಇಂದಿರಾ ನಗರದ ಮಸ್ಜಿದೆ ಉಮ್ಮುಲ್ ಹಸ್ನೈನ್ ಆಡಳಿತ ಸಮಿತಿಯ ಮಾಜಿ ಸದಸ್ಯ, ಹಝ್ರತ್ ಅಬು ಉಬೈದಾ ಬೈತುಲ್ ಮಾಲ್ ಟ್ರಸ್ಟ್‍ನ ಖಜಾಂಚಿ ಹಾಗೂ ಸಿಲಿಕಾನ್ ಸಿಟಿ ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿಯಾಗಿ ನಿಸಾರ್ ಅಹ್ಮದ್ ಸೇವೆ ಸಲ್ಲಿಸುತ್ತಿದ್ದರು.
ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಹಿಂದೂಪುರ ಖಬರಸ್ಥಾನ್‍ನಲ್ಲಿ ಶನಿವಾರ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವರ ನಿಧನಕ್ಕೆ ಸಿಲಿಕಾನ್ ಸಿಟಿ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಮುಹಮ್ಮದ್ ಇಬ್ರಾಹೀಂ ಶಫೀಕ್, ಮಸ್ಜಿದೆ ಉಮ್ಮುಲ್ ಹಸ್ನೈನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಖಾನ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.