×
Ad

ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

Update: 2024-01-25 13:10 IST

Photo: ANI

ಹೊಸದಿಲ್ಲಿ: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ.

ಇಂದು ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಶೆಟ್ಟರ್, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಒಪ್ಪಿದ್ದಾರೆ.

ನಂತರ ದಿಲ್ಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಿದ್ದಾರೆ. ಈ ಸಂದರ್ಭ ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News