×
Ad

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಜಗದೀಶ್ ಶೆಟ್ಟರ್

Update: 2024-01-25 14:07 IST

ಜಗದೀಶ್ ಶೆಟ್ಟರ್ (Screengrab:X/@ANI)

ಹೊಸದಿಲ್ಲಿ: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ಮತ್ತೆ ಬಿಜೆಪಿಗೆ ಮರಳಬೇಕೇಂದು ನಾಯಕರ ಮನವಿ ಮಾಡಿದ್ದರು. ಅಮಿತ್​ ಶಾ ಅವರು ನನ್ನನ್ನು ಗೌರವದಿಂದ ಬರಮಾಡಿಕೊಂಡಿದ್ದಾರೆ ಎಂದು ಹೇಳಿದರು.

ನಾನು ಕಾಂಗ್ರೆಸ್ ಪಕ್ಷ, ಪರಿಷತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ ನವರು ಅನ್ಯಾಯ ಮಾಡಿಲ್ಲ. ಕಾಂಗ್ರೆಸ್‌ ನವರು ನನಗೆ ಪಕ್ಷದಲ್ಲಿ ಸ್ಥಾನಮಾನ ನೀಡಿ ಗೌರವಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಎಂದೂ ಶೆಟ್ಟರ್‌ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News